ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವನತಾರಾ ಮೇಲಿನ ಆರೋಪಗಳ ಬಗ್ಗೆ ಎಸ್‌ಐಟಿ ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಅಂಗೀಕರಿಸಿ ಕ್ಲೀನ್ ಚಿಟ್ ನೀಡಿದೆ.
ವನತಾರಾದಲ್ಲಿ ಕಾಡು ಪ್ರಾಣಿಗಳ ಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಆನೆಗಳು ಸೇರಿದಂತೆ ಪ್ರಾಣಿಗಳ ಸ್ವಾಧೀನ ಕಾನೂನು ಪ್ರಕ್ರಿಯೆಗಳ ಅನುಗುಣವಾಗಿಯೇ ನಡೆದಿದೆ ಎಂದು ಎಸ್‌ಐಟಿ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸುವ ಮೂಲಕ ಪ್ರಾಣಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಕ್ಲೀನ್ ಚಿಟ್ ನೀಡಿದೆ.