September 23, 2026
Wednesday, September 23, 2026
spot_img

ಇನ್ಸ್‌ಪೆಕ್ಟರ್ ಧನಂಜಯ್ ಹೇಳಿಕೆ ವಿವಾದ: ತಮ್ಮ ವಿರುದ್ಧದ FIRಗೆ ಪ್ರತಾಪ್ ಸಿಂಹ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ. ನರಸೀಪುರ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ, ಪ್ರತಾಪ್ ಸಿಂಹ ಅವರು ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ವಿರುದ್ಧ ರಾಜಕೀಯ ಒತ್ತಡದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ ಅವರು, ಇನ್ಸ್‌ಪೆಕ್ಟರ್ ಹೇಳಿಕೆಯೇ ವಿವಾದಕ್ಕೆ ಕಾರಣವಾಗಿದ್ದು, ಮೊದಲು ಅವರ ವಿರುದ್ಧವೇ ಕ್ರಮ ಕೈಗೊಳ್ಳಬೇಕಿತ್ತು ಎಂದರು.

ಒಬ್ಬ ಇನ್ಸ್‌ಪೆಕ್ಟರ್ ನೀಡಿದ ಹೇಳಿಕೆಯನ್ನು ಪ್ರಶ್ನಿಸಿದ್ದಕ್ಕಾಗಿ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ ಹಿರಿಯ ಪೊಲೀಸ್ ಅಧಿಕಾರಿಗಳು ಗೃಹ ಸಚಿವರ ರಾಜಕೀಯ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದರು.

ಇದನ್ನೂ ಓದಿ:

ತಾವು ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ ಪ್ರತಾಪ್ ಸಿಂಹ, ರಾಜಕಾರಣಕ್ಕೂ ಮುನ್ನ ಪತ್ರಕರ್ತನಾಗಿದ್ದ ತಮಗೆ ಸಂವಿಧಾನ ಮತ್ತು ಕಾನೂನಿನ ಅರಿವಿದೆ ಎಂದರು. ಕಾನೂನು ಹೋರಾಟದ ಮೂಲಕವೇ ಪ್ರಕರಣಕ್ಕೆ ಉತ್ತರ ನೀಡುವುದಾಗಿ ಹೇಳಿದ್ದಾರೆ.

ಟಿ. ನರಸೀಪುರದ ಈ ವಿವಾದದಲ್ಲಿ ಪೊಲೀಸ್ ಅಧಿಕಾರಿಯ ಹೇಳಿಕೆ, ಶೋಭಾಯಾತ್ರೆ ಮತ್ತು ನಂತರದ ಎಫ್‌ಐಆರ್‌ ವಿಚಾರಗಳು ರಾಜಕೀಯ ವಾಗ್ವಾದಕ್ಕೂ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !