September 22, 2026
Tuesday, September 22, 2026
spot_img

WEATHER | ರಾಜ್ಯದಲ್ಲಿ ಮುಂಗಾರು ಚುರುಕು, ಇಂದು ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಮೇಲೆ ಮುನಿಸಿಕೊಂಡಿದ್ದ ವರುಣದೇವ ಇತ್ತೀಚೆಗೆ ಸ್ವಲ್ಪ ಕರುಣೆ ತೋರಿದ್ದು, ಮುಂಗಾರು ಚುರುಕಾಗಿ ಇಂದು ಹಾಗೂ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಭಾನುವಾರವೂ ರಾಜ್ಯದಲ್ಲಿ ಮಳೆಯಾಗಿದ್ದು, ರಸ್ತೆಗಳೆಲ್ಲ ಹಳ್ಳದಂತಾಗಿವೆ. ಸಣ್ಣಗೆ ಸುರಿದ ಮಳೆಯಿಂದಾಗಿಯೇ ಹತ್ತಾರು ಅವಾಂತರಗಳು, ಟ್ರಾಫಿಕ್‌ ಜಾಮ್‌ ಸಂಭವಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !