Monday, September 15, 2025

14 ಸೈಟ್ ನುಂಗಿದ ನೀವು ನನಗೆ ಬುದ್ದಿ ಹೇಳಲು ಬರೋದು ಬೇಡ: ಪ್ರತಾಪ್‌ ಸಿಂಹ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

14 ಸೈಟ್ ನುಂಗಿದ ನೀವು ನನಗೆ ಬುದ್ದಿ ಹೇಳಲು ಬರುವುದು ಬೇಡ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಬಾರದು ಎಂದು ಹೇಳಿದ ಪ್ರತಾಪ್ ಸಿಂಹ ಮೂರ್ಖ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಸರ್ ಏನು ಬೇಕಾದರೂ ನನ್ನ ಕರೆಯಲಿ. ಅವರಿಗೂ ಸೋಷಿಯಲ್ ಮೀಡಿಯಾದಲ್ಲಿ ಏನೇನು ಕರೆಯುತ್ತಾರೆ ಎನ್ನುವುದನ್ನು ನೋಡಲಿ. ಅದನ್ನು ನೋಡಿದರೆ ಅವರು ಮುಖ ಮುಚ್ಚಿಕೊಂಡು ಓಡಾಡಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ