September 22, 2026
Tuesday, September 22, 2026
spot_img

ಅಮಾನತು ಹಣ ಬಿಡುಗಡೆಗೆ ಲಂಚ: ಲೋಕಾಯುಕ್ತ ಪೊಲೀಸ್ ಬಲೆಗೆ ಬಜ್ಪೆ ಪೊಲೀಸ್ ಇನ್ಸ್‌ಪೆಕ್ಟರ್!

ಹೊಸದಿಗಂತ ವರದಿ ಮಂಗಳೂರು:

ಬಜ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲಂಚ ಸ್ವೀಕಾರ ಸಂದರ್ಭ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಜ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಮೂಲಗಳ ಪ್ರಕಾರ ಬಾಲಕೃಷ್ಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಅಮಾನತುಪಡಿಸಲಾಗಿದ್ದ ಹಣವನ್ನು ಬಿಡುಗಡೆ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಒಂದಷ್ಟು ಹಣವನ್ನು ಮುಂಚಿತವಾಗಿ ಪಡೆದುಕೊಂಡಿದ್ದರು. ಬಳಿಕ ಹೆಚ್ಚುವರಿಯಾಗಿ ಇನ್ನಷ್ಟು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಅದರಂತೆ ಸೋಮವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು,ದೂರುದಾರರಿಂದ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !