September 22, 2026
Tuesday, September 22, 2026
spot_img

ಬೀದರ್‌ನಲ್ಲಿ ಲೋಕಾ ಶಾಕ್: ಬೆಳ್ಳಂಬೆಳಗ್ಗೆ ನಿವೃತ್ತ ಕೃಷಿ ಅಧಿಕಾರಿ ಮನೆ ಮೇಲೆ ದಿಢೀರ್ ರೇಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೀದರ್ ಜಿಲ್ಲೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಇಂದು ಮುಂಜಾನೆ ಕೃಷಿ ಇಲಾಖೆಯ ಮಾಜಿ ಅಧಿಕಾರಿಯೊಬ್ಬರ ನಿವಾಸ ಹಾಗೂ ಫಾರ್ಮ್‌ಹೌಸ್ ಮೇಲೆ ಲೋಕಾಯುಕ್ತ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಶಾಕ್ ನೀಡಿದ್ದಾರೆ.

ಅಕ್ರಮವಾಗಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪಾಸ್ತಿ ಸಂಪಾದಿಸಿದ್ದಾರೆ ಎಂಬ ಗಂಭೀರ ದೂರು ಕೇಳಿಬಂದ ಹಿನ್ನೆಲೆಯಲ್ಲಿ, ಕೃಷಿ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಮಾಣೀಕ್ ಶೆರಿಕಾರ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಈ ದಾಳಿ ನಡೆದಿದೆ.

ಇದನ್ನೂ ಓದಿ:


ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ಅವರ ನೇತೃತ್ವದ ವಿಶೇಷ ತನಿಖಾ ತಂಡವು ಬೆಳ್ಳಂಬೆಳಗ್ಗೆಯೇ ಕಾರ್ಯಾಚರಣೆಗೆ ಇಳಿದಿದ್ದು, ಬೀದರ್ ನಗರದ ಹಕ್ಕ್ ಕಾಲೋನಿಯಲ್ಲಿರುವ ಮಾಣೀಕ್ ಅವರ ಸ್ವಗೃಹ, ಹುಮ್ನಾಬಾದ್‌ನಲ್ಲಿರುವ ಅವರ ಮತ್ತೊಂದು ನಿವಾಸ, ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮದ ವ್ಯಾಪ್ತಿಯಲ್ಲಿರುವ ಅವರ ಫಾರ್ಮ್ ಹೌಸ್ ಮೇಲೆ ಏಕಾಕಾಲದಲ್ಲಿ ದಾಳಿ ನಡೆಸಿದ್ದಾರೆ. ಸದ್ಯ ನಿವೃತ್ತ ಅಧಿಕಾರಿಯ ನಿವಾಸದಲ್ಲಿ ಬ್ಯಾಂಕ್ ಖಾತೆಗಳು, ಚಿನ್ನಾಭರಣ ಹಾಗೂ ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಜಾಲಾಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !