ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರನ್ನು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಪದ್ಮವಿಭೂಷಣ ಪುರಸ್ಕೃತ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಅನಾವರಣಗೊಳಿಸಲಾಯಿತು.
ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜೀವನವು ಭಕ್ತಿ, ಜ್ಞಾನ ಮತ್ತು ಸೇವೆಯ ಆದರ್ಶಗಳಿಂದ ಕೂಡಿದ್ದು, ಅಸಂಖ್ಯಾತ ಜನರಿಗೆ ನಿರಂತರ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇವು ಶ್ರೀಗಳ ಉದಾತ್ತ ಆದರ್ಶಗಳು ಹಾಗೂ ಸಂದೇಶಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವಲ್ಲಿ ನೆರವಾಗಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಜನ್ಮ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಈ ಲಾಂಛನ ಅನಾವರಣ ಪ್ರಮುಖ ಘಟ್ಟವಾಗಿದೆ.



