September 23, 2026
Wednesday, September 23, 2026
spot_img

ಮನೆಯ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಂದಮ್ಮನ ದಾರುಣ ಅಂತ್ಯ

ಹೊಸದಿಗಂತ ವರದಿ ಮಡಿಕೇರಿ:

ಮನೆಯ ಬಾಗಿಲಿನ ಬಳಿ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡು ಮೂರು ವರ್ಷದ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಸಂಜೆ ಚೆಟ್ಟಳ್ಳಿಯಲ್ಲಿ ನಡೆದಿದೆ.

ಚೆಟ್ಟಳ್ಳಿಯ ಪುತ್ತರಿರ ಶಿವು ನಂಜಪ್ಪ ಹಾಗೂ ರತಿ ನಂಜಪ್ಪ ದಂಪತಿಯ ದ್ವಿತೀಯ ಪುತ್ರ ಶಿಯಾನ್ ನಂಜಪ್ಪ (3) ಮೃತಪಟ್ಟ ಬಾಲಕ.

ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಮನೆಯ ಬಾಗಿಲಿನ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಬಾಲಕನಿಗೆ ಆಕಸ್ಮಿಕವಾಗಿ ತಗುಲಿದ್ದು, ವಿದ್ಯುತ್ ಸ್ಪರ್ಶದಿಂದ ಆತ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪುಟ್ಟ ಕಂದನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದ್ದು, ಘಟನೆಯಿಂದ ಚೆಟ್ಟಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !