ಕೊಪ್ಪಳ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳದ ನಗರಸಭೆ ಕಚೇರಿ, ನಗರಸಭೆ ಜೆಇ ಸೋಮಲಿಂಗಪ್ಪ, ಕಂದಾಯ ನಿರೀಕ್ಷಕ ಉಜ್ವಲ್, ಗುತ್ತಿಗೆದಾರರಾದ ಶಕೀಲ್ ಪಟೇಲ್, ಪ್ರವೀಣ ಕಂದಾರಿ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಐದು ತಂಡಗಳನ್ನು ರಚಿಸಿ ಡಿವೈಎಸ್ಪಿ ವಸಂತಕುಮಾರ್, ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ಸ್‌ಪೆಕ್ಟರ್‌ಗಳಾದ ವಿಜಯಕುಮಾರ್, ಚಂದ್ರಪ್ಪ, ನಾಗರತ್ನ, ಶೈಲಾ, ಅಮರೇಶ ಹುಬ್ಬಳ್ಳಿ ಸೇರಿ ಹಲವು ಸಿಬ್ಬಂದಿ ಭಾಗಿಯಾಗಿದ್ದಾರೆ.