September 25, 2026
Friday, September 25, 2026
spot_img

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಾ*ವು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಎಸಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 9 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ.

ಏನಿದು ಘಟನೆ?

ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ. ಬೆಂಕಿ ಕಾಣಿಸಿಕೊಂಡ ಬಳಿಕ ಕೆಲ ಪ್ರಯಾಣಿಕರು ಸುಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿ ಚಾಲಕ ಹಾಗೂ ನಿರ್ವಾಹಕರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಆದರೆ ಬೆಂಕಿ ವೇಗವಾಗಿ ಹರಡಿದ್ದರಿಂದ ಹಲವು ಪ್ರಯಾಣಿಕರು ಬಸ್‌ನೊಳಗೆ ಸಿಲುಕಿಕೊಂಡಿದ್ದಾರೆ. ಮೃತರಲ್ಲಿ ಓರ್ವ ಮಹಿಳೆ ಹಾಗೂ ಎಂಟು ಪುರುಷರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

ನೆರವು ಘೋಷಿಸಿದ ಯೋಗಿ ಆದಿತ್ಯನಾಥ್

ಈ ದುರಂತದ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ ನೆರವು ಘೋಷಿಸಿದ್ದಾರೆ. ಅಧಿಕಾರಿಗಳಿಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವಂತೆ ಸೂಚಿಸಿದ್ದಾರೆ.

Must Read