ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನ ಮತ್ತು ಬೆಳ್ಳಿ ಬೆಲೆಗಳ ದಾಖಲೆ ಓಟ ಮತ್ತೆ ಶುರುವಾಗಿದೆ. ಇಂದು ಮಂಗಳವಾರ ಚಿನ್ನದ ಬೆಲೆಯಲ್ಲಿ 80 ರೂ ಹೆಚ್ಚಾದರೆ, ಬೆಳ್ಳಿ ಬೆಲೆ 1 ರೂನಷ್ಟು ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ 10,250 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆ 11,200 ರೂ ಸಮೀಪಕ್ಕೆ ಹೋಗಿ ಹೊಸ ದಾಖಲೆ ಬರೆದಿದೆ.
ವಿದೇಶಗಳಲ್ಲೂ ಸ್ವರ್ಣ ಬೆಲೆ ಗರಿಷ್ಠಕ್ಕೆ ಹೋಗಿದೆ. ಅಮೆರಿಕ, ಸಿಂಗಾಪುರಗಳಲ್ಲಿ ಬೆಲೆ 10,000 ರೂ ದಾಟಿದೆ. ಬೆಳ್ಳಿ ಬೆಲೆಯೂ 144 ರೂಗಳಿಗೆ ಹೋಗಿ ಹೊಸ ದಾಖಲೆ ಮಾಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,02,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,11,930 ರುಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 13,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,02,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 13,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,400 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಬೆಳ್ಳಿ ಬೆಲೆ 10 ಗ್ರಾಂಗೆ: 1,340 ರೂ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,11,930 ರೂ