September 25, 2026
Friday, September 25, 2026
spot_img

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಪುಣೆ ಮೂಲದ ನಾಲ್ವರು ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಎಂಬ ಗ್ರಾಮದ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಪುಣೆ ನಿವಾಸಿಗಳಾದ ನವನೀತ್ ಗಯಾಕ್ವಾಡ್, ವಿಶ್ವನಾಥ್ ದಿಗಂಬರ, ಕಿರಣ್ ಮತ್ತು ವಿಶಾಲ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಒಟ್ಟು ಐದು ಜನರ ಪೈಕಿ ಸೋಮನಾಥ್ ಕೊಲ್ಲಿ ಎಂಬುವವರು ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

ಅತಿ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಕಾರು ಸುಮಾರು 200 ಮೀಟರ್ ದೂರದವರೆಗೆ ಪಲ್ಟಿಯಾಗುತ್ತಾ ಹೋಗಿ ಸಂಪೂರ್ಣ ಜರ್ಜರಿತಗೊಂಡಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Must Read