September 26, 2026
Saturday, September 26, 2026
spot_img

ಗಣೇಶ ವಿಸರ್ಜನೆ ವೇಳೆ ದುರಂತ: ನೀರಲ್ಲಿ ಮುಳುಗಿ ಯುವಕ ಸಾ*ವು

ಹೊಸದಿಗಂತ ವರದಿ ಬೆಳಗಾವಿ:

ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿಗೆ ಇಳಿದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ನಗರದ ಹೊರವಲಯದ ಮಚ್ಛೆ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ವಿಶ್ವನಾಥ ನಾಯಕ್ (18) ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ ತೆರಳಿದ್ದ ಸಂದರ್ಭದಲ್ಲಿ ನೀರಿಗೆ ಇಳಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ.

ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಯುವಕನನ್ನು ನೀರಿನಿಂದ ಹೊರತೆಗೆಯಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ಸ್ಥಳೀಯರಿಂದ ತಿಳಿದು ಬಂದಿದೆ.

ಇದನ್ನೂ ಓದಿ:

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿಯೇ ಇದ್ದ ಪೊಲೀಸರು, NDRF ಸಿಬ್ಬಂದಿಗಳು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಯುವಕನ ಅಕಾಲಿಕ ಸಾವಿನಿಂದ ಮಚ್ಛೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಯುವಕರು ನೀರಿನ ಆಳ, ಹರಿವು ಸೇರಿದಂತೆ ಸುರಕ್ಷತಾ ಅಂಶಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

Must Read