Wednesday, September 17, 2025

ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಗಳಿಕೆ ಕೇಸ್: ದಿನೇಶ್ ಗುಂಡೂರಾವ್‌ಗೆ ನೊಟೀಸ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದಾರೆ.

ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿದ್ದ ದಿನೇಶ್ ಗುಂಡೂರಾವ್‌ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.

ಇದನ್ನೂ ಓದಿ