September 27, 2026
Sunday, September 27, 2026
spot_img

ರಹಿಮಾನ್ ಹತ್ಯಾ ಪ್ರಕರಣದಲ್ಲಿ ನೊಟೀಸ್: ಪೊಲೀಸ್ ವಿಚಾರಣೆಗೆ ಕಾಲಾವಕಾಶ ಕೋರಿದ ಕಲ್ಲಡ್ಕ ಡಾ. ಭಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:


ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ರಹಿಮಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿ ಹಿಂದು ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರಿಗೆ ಪೊಲೀಸರು ನೊಟೀಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.


ಸೆ.23ರಂದು ಪೊಲೀಸ್ ನೋಟೀಸ್ ಡಾ. ಭಟ್ ಅವರಿಗೆ ತಲುಪಿದ್ದು, ನೋಟೀಸ್‌ನಲ್ಲಿ ಸೂಚಿಸಲಾದ ದಿನಾಂಕದಂದು ವಿಚಾರಣೆಗೆ ಹಾಜರಾಗಲು ಅನಾನುಕೂಲವಾಗಿದೆ. ಅವರು ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಹಲವು ಕಾರ್ಯಕ್ರಮಗಳು ಮುಂಚಿತವಾಗಿಯೇ ನಿಗದಿಯಾಗಿವೆ.

ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ನೋಟೀಸ್‌ನಲ್ಲಿ ಸೂಚಿಸಿರುವ ದಿನಾಂಕದಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವಿಚಾರಣೆಗೆ ಹಾಜರಾಗಲು ಅಗತ್ಯ ಸಿದ್ಧತೆ ಹಾಗೂ ಸಮಯ ಹೊಂದಿಸಿಕೊಳ್ಳಲು ಕನಿಷ್ಠ ಒಂದು ತಿಂಗಳ ಕಾಲಾವಕಾಶ ನೀಡಿ ದಿನಾಂಕ ನಿಗದಿಪಡಿಸಿದಲ್ಲಿ ಅನುಕೂಲವಾಗಲಿದೆ. ಕಾಲಾವಕಾಶ ನೀಡಿ ಹೊಸ ದಿನಾಂಕ ನಿಗದಿಪಡಿಸಬೇಕು ಹಾಗೂ ಆ ದಿನಾಂಕದಂದು ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸಲು ಅವಕಾಶ ಕಲ್ಪಿಸಬೇಕು ಎಂದು ಡಾ. ಪ್ರಭಾಕರ ಭಟ್ ಅವರ ಪರ ವಕೀಲರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ತನಿಖಾಧಿಕಾರಿ ಕಲೈಮಾರ್ ಪಿ. ಅವರಿಗೆ ಮನವಿ ಸಲ್ಲಿಸಿದ್ದಾರೆ. ಶನಿವಾರ ಡಾ. ಭಟ್ ವಿಚಾರಣೆಗಾಗಿ ನೋಟಿಸ್ ಜಾರಿ ಮಾಡಲಾಗಿತ್ತು.

Must Read