ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದುಕೊಂಡು ಮುಂದಕ್ಕೆ ಮತ್ತು ಹಿಂದಕ್ಕೆ 30 ನಿಮಿಷದಲ್ಲಿ 3 ಸಾವಿರಕ್ಕೂ ಅಧಿಕ ಬಾರಿ ಮುಟ್ಟಿಸುವುದರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದ ಕು. ರಕ್ಷಾ ಡಿ. ಗೋಲ್ಡನ್ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ ಸಮಾರಂಭದಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ.

ಕಾಲೇಜಿನ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಮುಖ್ಯಸ್ಥರಾದ ಡಾ. ಮನೀಷ್ ವೈಷ್ಟೋಯಿ ಅವರ ಸಮ್ಮುಖದಲ್ಲಿ ಪ್ರದರ್ಶನ ನೀಡುವ ಮೂಲಕ ರಕ್ಷಾ ಡಿ. ಅವರು ಸಾಧನೆಯನ್ನು ಮಾಡಿದರು.
ಡಾ. ಮನೀಷ್ ವೈಷ್ಣವಿಯವರು ಪ್ರಶಸ್ತಿ ಪತ್ರ ಪದಕ ನೀಡಿ ಕು. ರಕ್ಷಾ ಅವರನ್ನು ಪುರಸ್ಕರಿಸಿದರು.

ಈ ಕಾರ್ಯಕ್ರಮವನ್ನು ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ ಉದ್ಘಾಟಿಸಿ ಶುಭ ಹಾರೈಸಿದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಜಯವಿಕ್ರಮ ಕಲ್ಲಾಪು, ಉಷಾ ಅಂಚನ್ ನೆಲ್ಯಾಡಿ, ಶುಭ ಹಾರೈಸಿದರು.

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಕಡಬ ತಾಲೂಕು ಅಧ್ಯಕ್ಷ ಸತೀಶ್ ಕೆ ಐತ್ತೂರು, ರಾಮಕುಂಜ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಆರ್ ಕೆ., ಸುಚೇತಾ ಬರೆಂಬೆಟ್ಟು, ಮಾಲತಿ ಕದ್ರ, ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ, ಶ್ರೀ ರಾಮಕುಂಜೇಶ್ವರ ವಿದ್ಯಾ ವರ್ಧಕ ಸಭಾದ ಕೋಶಾಧಿಕಾರಿ ಕೆ. ಸೇಸಪ್ಪ ರೈ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ ಕೊಯಿಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ದಾಮ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ ಎಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಚಂದ್ರಶೇಖರ ಕೆ ಸ್ವಾಗತಿಸಿ, ಉಪನ್ಯಾಸಕ ಸುಬ್ರಹ್ಮಣ್ಯ ಕಾರಂತ್ ವಂದಿಸಿದರು. ಉಪನ್ಯಾಸಕಿ ಸಪ್ನಾ ಕಾರ್ಯಕ್ರಮ ನಿರೂಪಿಸಿದರು.



