ಹೊಸ ದಿಗಂತ ವರದಿ, ಗದಗ:
ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದ ವೇಳೆ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ.
ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪಕೇಂದ್ರದಲ್ಲಿ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಹಳ್ಳದಲ್ಲಿ ಕೊಚ್ಚಿಹೋಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಉಳಿದAತೆ ಸಮುದಾಯ ಆರೋಗ್ಯ ಅಧಿಕಾರಿ ಬಸವರಾಜ ಕಡಪಟ್ಟಿ ಆರೋಗ್ಯ ನಿರೀಕ್ಷಣ ಅಧಿಕಾರಿ ವಿರಸಂಗಯ್ಯ ಹಿರೇಮಠ ಅವರನ್ನು ರಕ್ಷಣೆ ಮಾಡಲಾಗಿದೆ.
ಗದಗ ಜಿಲ್ಲೆ ರೋಣ ತಾಲೂಕಿನ ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರದಿAದ ಯಾ.ಸ. ಹಡಗಲಿ ಗ್ರಾಮದಲ್ಲಿ ಜರುಗಿದ ಆರೋಗ್ಯ ಶಿಬಿರ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಮAಗಳವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹಳ್ಳ ರಭಸವಾಗಿ ಹರಿಯುತ್ತಿದ್ದು, ಈ ವೇಳೆ ಯಾ.ಸ ಹಡಗಲಿ ಗ್ರಾಮದಿಂದ ಕೌಜಗೇರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಹಳ್ಳ ದಾಟುವಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಕೊಚ್ಚಿ ಹೋಗಿದ್ದಾರೆ. ಸಂಜೆವರೆಗೆ ಶೋಧ ಕಾರ್ಯ ನಡೆಸಿದರೂ ಪತ್ತೆಯಾಗದ ಕಾರಣ, ಬುಧವಾರ ಮತ್ತೆ ಶೋಧ ಕಾರ್ಯಮುಂದುವರಿಯಲಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಸ್. ನಿಲಗುಂದ, ಹಾಗೂ ರೋಣ ತಹಶೀಲ್ದಾರ ನಾಗರಾಜ ಕೆ. ಅವರು ತಿಳಿಸಿದ್ದಾರೆ.