September 29, 2026
Tuesday, September 29, 2026
spot_img

ಬೈಕ್‌ನಲ್ಲಿ ಸ್ಟಂಟ್ ಮಾಡಿ ರೀಲ್ಸ್‌ ಪೋಸ್ಟ್: ಯುವಕನ ವಿರುದ್ಧ ಎಫ್‌ಐಆರ್ ದಾಖಲಿಸಿದ ಪೊಲೀಸರು

ಹೊಸದಿಗಂತ ವರದಿ ಚಿತ್ರದುರ್ಗ:

ನಗರದ ಪ್ರಮುಖ ರಸ್ತೆಯಲ್ಲಿ ಅಪಾಯಕರ ರೀತಿಯಲ್ಲಿ ಬೈಕ್ ಚಲಾಯಿಸಿ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಪೋಸ್ಟ್ ಮಾಡಿದ್ದ ಯುವಕನೊಬ್ಬನ ವಿರುದ್ಧ ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಗರದ ಮುಖ್ಯರಸ್ತೆಯಲ್ಲಿ ಕೆಎ-16 ಹೆಚ್‌ಸಿ-4095 ನೊಂದಣಿ ಸಂಖ್ಯೆಯುಳ್ಳ ಬೈಕ್ ಸವಾರ ತನ್ನ ಬೈಕ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ತನ್ನ ಎರಡೂ ಕೈಗಳನ್ನು ಬಿಟ್ಟು ಚಲಾಯಿಸಿ ರೀಲ್ಸ್ ಮಾಡಿದ್ದ. ಇದನ್ನು ಇದನ್ನು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದ. ಮೊಬೈಲ್‌ನಲ್ಲಿ ಇದನ್ನು ಗಮಿಸಿದ ಸಂಚಾರಿ ಠಾಣೆ ಪೊಲೀಸ್ ಮಧು ಎಂಬುವರು ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಸಂಚಾರಿ ಠಾಣೆ ಪೊಲೀಸರು ಯುವಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Must Read