September 30, 2026
Wednesday, September 30, 2026
spot_img

ದುಷ್ಕರ್ಮಿಗಳಿಂದ ಶೂಟೌಟ್‌ : ಶಿವಸೇನೆ ನಾಯಕ ಪ್ರದೀಪ್ ಪುರ್ಣೇಕರ್ ಹ*ತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಥಾಣೆಯಲ್ಲಿ ಶಿವಸೇನೆಯ ನಾಯಕ ಪ್ರದೀಪ್‌ ಪುರ್ಣೇಕರ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ನಿನ್ನೆ ರಾತ್ರಿ ಏಕಾಏಕಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾನಪಾಡ ಉಪವಿಭಾಗದ ಮುಖ್ಯಸ್ಥ ಪ್ರದೀಪ್ ಪುರ್ಣೇಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಪ್ರದೀಪ್‌ ನಿನ್ನೆ ರಾತ್ರಿ ತಮ್ಮ ಮಾನಪಾಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರು ಯುವಕರು ಬಂದು ಹಲ್ಲೆ ನಡೆಸಿದ್ದಾರೆ. ನಂತರ ಎರಡು ಸುತ್ತು ಗುಂಡಿನ ದಾಳಿ ಮಾಡಿದ್ದಾರೆ. ಪ್ರದೀಪ್‌ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಂತರ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಮರ್ಜೆನ್ಸಿ ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ. ಕಪುರ್‌ಬಾವಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ದುಷ್ಕರ್ಮಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಥಾಣೆಯ ಪ್ರಮುಖ ನಿರ್ಗಮನ ಮಾರ್ಗಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿದ್ದಾರೆ.

ದುಷ್ಕರ್ಮಿಗಳು ಯಾರು? ಹೇಗೆ ಪ್ಲಾನ್‌ ಮಾಡಿದ್ದರು? ಕಾರಣ ಏನು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Must Read