September 30, 2026
Wednesday, September 30, 2026
spot_img

ಎಂಅರ್ ಪಿಎಲ್ ಸ್ಫೋಟ | ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿ, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಗಳೂರು ನಗರದ ಹೊರವಲಯ ಸುರತ್ಕಲ್‌ ಪರಿಸರದಲ್ಲಿರುವ ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಸ್ಫೋಟದಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, ಸ್ಫೋಟದಲ್ಲಿ ಇಬ್ಬರು ವ್ಯಕ್ತಿಗಳಿಗೆ ಸುಟ್ಟಗಾಯಗಳಾಗಿವೆ. ಪ್ಲಾಂಟ್‌ನಲ್ಲಿ ರಾಜೇಶ್‌ ಬ್ಯಾಪ್ಟಿಸ್ಟ್‌ ಎನ್ನುವವರಿಗೆ ಶೇ.35ರಷ್ಟು ಸುಟ್ಟಗಾಯಗಳಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನೆಯಲ್ಲಿ ಯಾರೂ ಮೃತಪಟ್ಟಿಲ್ಲ. ಪಕ್ಕದ ಕಚೇರಿಯಲ್ಲಿದ್ದ ಒಂಬತ್ತು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಒಪಿಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿದ್ದಾರೆ.

Must Read