September 30, 2026
Wednesday, September 30, 2026
spot_img

ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಗಾಯಾಳು ಪೈಕಿ ಓರ್ವ ಸಾ*ವು

ಹೊಸದಿಗಂತ ವರದಿ ಮಂಗಳೂರು:

ಮಂಗಳೂರಿನ ಬೈಕಂಪಾಡಿಯಲ್ಲಿರುವ ಎಂಆರ್‌ಪಿಎಲ್ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (ಸಿಎಚ್‌ಟಿಯು) ಬುಧವಾರ ಸಂಭವಿಸಿದ ಭಾರೀ ಸ್ಫೋಟ ಮತ್ತು ಅಗ್ನಿದುರಂತದಲ್ಲಿ ಗಾಯಾಳುಗಳ ಪೈಕಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾರೆ.

ಉಳಿದ 9 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎಂದು ಎಂಆರ್ ಪಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರ ಪೈಕಿ ಒಬ್ಬರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಎಂಟು ಮಂದಿ ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಚ್‌ಟಿಯು ಕೋಲ್ಡ್ ಸೆಪರೇಟರ್‌ನಲ್ಲಿ ಈ ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 70 ಬಾರ್ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೋಲ್ಡ್ ಸೆಪರೇಟರ್ ಹಾನಿಗೊಂಡು ಈ ಘಟನೆ ಸಂಭವಿಸಿದೆ ಎಂದು ಎಂ ಆರ್ ಪಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಳಿಕ ಸಂಬಂಧಿತ ಘಟಕದ ಬ್ಯಾಟರಿ ಮಿತಿಗಳನ್ನು ಪ್ರತ್ಯೇಕಗೊಳಿಸಲಾಗಿದೆ. ಸ್ಥಳಿಯ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಎಂ ಆರ್ ಪಿ ಎಲ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Must Read