ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅವರಿಗೆ ಇಂದು 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಟ್ರಂಪ್ ಶುಭಾಶಯಕ್ಕೆ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ಉತ್ತಮಗೊಳಿಸುವ ಬದ್ಧತೆ ಮತ್ತು ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಅಮೆರಿಕದ ನಿಲುವಿಗೆ ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಧಾನಿ ಒತ್ತಿ ಹೇಳಿದ್ದಾರೆ.
“ನಿಮ್ಮಂತೆಯೇ ನಾನು ಕೂಡ ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬದ್ಧನಾಗಿದ್ದೇನೆ.” ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.