Wednesday, September 17, 2025

WEATHER | ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಇದಕ್ಕೆ ತಕ್ಕಂತೆ ಪ್ಲ್ಯಾನ್‌ ಬದಲಾಯಿಸಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂದಿನ 2 ದಿನಗಳು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ