ಹೊಸದಿಗಂತ ವರದಿ ಅಂಕೋಲಾ:
ಸಾರಿಗೆ ಸಂಸ್ಥೆಯ ಬಸ್ ಲಾರಿಗೆ ಡಿಕ್ಕಿ ಹೊಡೆದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎರಡು ವರ್ಷದ ಬಾಲಕ ಮೃತಪಟ್ಟು 25 ಕ್ಕೂ ಹೆಚ್ಚಿನ ಜನರು ತೀವ್ರ ಗಾಯಗೊಂಡ ಘಟನೆ ತಾಲೂಕಿನ ಬೆಳಸೆ ಬಳಿ ಸಂಭವಿಸಿದೆ.
ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕುಮಟಾದಿಂದ ಅಂಕೋಲಾ ಕಡೆ ಬರುತ್ತಿದ್ದ ಅಂಕೋಲಾ ಘಟಕಕ್ಕೆ ಸೇರಿದ ಸಾರಿಗೆ ಸಂಸ್ಥೆಯ ಬಸ್ ರಾಷ್ಟ್ರೀಯ ಹೆದ್ದಾರಿ 66 ಬೆಳಸೆ ಹಂದಿಗದ್ದೆ ಕ್ರಾಸ್ ಬಳಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಸ್ಥಳೀಯರು,ತಕ್ಷಣ ಕಾರ್ಯಪೃವೃತ್ತರಾಗಿ ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರಗಡೆ ತೆಗೆದು ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದ್ದಾರೆ.
ತಹಸೀಲ್ದಾರ ನಿಶ್ಚಲ ನರೋನಾ, ಪೊಲೀಸ್ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಬೇಕಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.



