ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿನ್ನಿಪಡ್ಪು ಶ್ರೀ ಆದಿ ಮುಗೇರ್ಕಳ ದೈವಸ್ಥಾನ, ಶ್ರೀ ಪಂಜುರ್ಲಿ ದೈವಸ್ಥಾನ ಪರಿಸರ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.

ಮಾಜಿ ಸಚಿವ ಬಿ ರಮನಾಥ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಕೆಪಿಸಿಸಿ ಸದಸ್ಯರಾದ ಪ್ರಕಾಶ್ ಶೆಟ್ಟಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಮುಖಂಡರಾದ ಅಬ್ಬಾಸ್ ಆಲಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐದಾ ಸುರೇಶ್ , ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಫಲ್ಯ , ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ A.B . ಅಬ್ದುಲ್ಲಾ, ಪದ್ಮನಾಭ ರೈ, ಪಿಯೂಷ್ ರೋಡ್ರಿಗಸ್, ಮಹಮ್ಮದ್ ನಂದಾವರ, ಸಿರಾಜ್ ಮದಕ, ಸಿದ್ದೀಕ್ ಸರವು, ಅಬ್ದುಲ್ ರಜಾಕ್ ಕೊಳ್ನಾಡು, ಪಿ ಬಿ ಇಬ್ರಾಹಿಂ, ಫ್ರಾನ್ಸಿಸ್ ಕೊಳ್ನಾಡು ಹಾಗೂ ಹಲವು ಕಾಂಗ್ರೆಸ್ ನಾಯಕರು ಮತ್ತು ದೇವಸ್ಥಾನದ ಅಧ್ಯಕ್ಷರೂ ಸೇರಿದಂತೆ ಊರಿನ ಹಲವಾರು ಮಂದಿ ಭಾಗಿಯಾಗಿದ್ದರು.




