ಹೊಸದಿಗಂತ ವರದಿ ಕಾರವಾರ:
ಸಾರಿಗೆ ಸಂಸ್ಥೆಯ ಬಸ್ಸೊಂದು ಕಂದಕಕ್ಕೆ ಉರುಳಿ 12 ಜನರು ತೀವ್ರವಾಗಿ ಗಾಯಗೊಂಡ ಘಟನೆ ಶಿರಸಿ ಕುಮಟ ರಸ್ತೆಯ ದೇವಿಮನೆ ಘಟ್ಟದ ಮಾಸ್ತಿಹಳ್ಳದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು ಬಸ್ಸಿನಲ್ಲಿ 38 ಜನ ಪ್ರಯಾಣಿಕರು ಚಾಲಕ ಮತ್ತು ನಿರ್ವಾಹಕ ಇದ್ದರು.
ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.



