October 2, 2026
Friday, October 2, 2026
spot_img

ಲಾರಿ-ಪಿಕಪ್‌ ವ್ಯಾನ್‌ ನಡುವೆ ಭೀಕರ ಅಪಘಾತ : ಸ್ಥಳದಲ್ಲಿಯೇ ಏಳು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಲಾರಿ ಹಾಗೂ ಪಿಕಪ್‌ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪಿಕಪ್‌ ವಾಹನದಲ್ಲಿ ಭಕ್ತರು ದುರ್ಗಾ ದೇವಿಯ ಮೂರ್ತಿಯ ಜೊತೆ ವಾರ್ಧಾಕ್ಕೆ ತೆರಳುತ್ತಿದ್ದರು. ಧಾಮಂಗಾಂವ್‌ ರೈಲ್ವೆ ನಿಲ್ದಾಣದ ಸಮೀಪ ಸಮೃದ್ಧಿ ಮಹಾಮಾರ್ಗದಲ್ಲಿ ಪಿಕಪ್‌ ವಾಹನ ಸಾಗುತ್ತಿದ್ದ ವೇಳೆ ಹಿಂದಿನಿಂದ ಲಾರಿ ಬಂದು ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಐದು ಮಂದಿ ಪ್ರಾಣ ಬಿಟ್ಟಿದ್ದಾರೆ. 21 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕಿತ್ಸೆಗೆಂದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ ವೇಳೆ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಗ್ಗೆ ತಿಳಿದ ಕೂಡಲೇ ಧಾಮಂಗಾಂವ್ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಪಿಕಪ್ ವ್ಯಾನ್ ನಡುವೆ ಅಪಘಾತ ಸಂಭವಿಸಲು ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Must Read