October 3, 2026
Saturday, October 3, 2026
spot_img

WEATHER | ಮುಂದಿನ ಎರಡು ದಿನ ರಾಜ್ಯದ ಹಲವೆಡೆ ಮಳೆ: ಆದರೆ ಉತ್ತರ ಒಳನಾಡಿನಲ್ಲಿ ಒಣಹವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಸದ್ಯಕ್ಕೆ ಕೊಂಚ ಕ್ಷೀಣಿಸಿದ್ದು, ಕಳೆದ 24 ಗಂಟೆಗಳಲ್ಲಿ ಕೊಡಗಿನ ನಾಪೋಕ್ಲುವಿನಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಇನ್ನುಳಿದಂತೆ ಭಾಗಮಂಡಲ ಮತ್ತು ಸುಳ್ಯದಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.

ಎಲ್ಲೆಲ್ಲಿ ಮಳೆ?

ಇಂದು ಮತ್ತು ನಾಳೆ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾನಾಡಿನ ಭಾಗಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು.  

ನಾಳೆ ಮಳೆಯ ತೀವ್ರತೆ ಕೊಂಚ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಆದರೆ ರಾಮನಗರ ಹಾಗೂ ತುಮಕೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಉತ್ತರ ಒಳನಾಡಿನ ಸ್ಥಿತಿ

ಬೆಳಗಾವಿ, ಧಾರವಾಡ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಮುನ್ಸೂಚನೆ ಇದೆ. ಬೀದರ್, ಕಲಬುರಗಿ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

Must Read