October 3, 2026
Saturday, October 3, 2026
spot_img

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ: ಅ.10ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಬೆಂಗಳೂರು:

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ನದಿಗಳಾದ ಬೇಡ್ತಿ ಮತ್ತು ಅಘನಾಶಿನಿ ನದಿಗಳನ್ನು ಬಯಲುಸೀಮೆಗೆ ತಿರುಗಿಸುವ ನದಿ ಜೋಡಣೆ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಅಕ್ಟೋಬರ್ 10ರಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಶ್ಚಿಮಘಟ್ಟ ಹಾಗೂ ನದಿ ಕಣಿವೆಗಳ ಉಳಿವಿಗಾಗಿ ‘ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ’ ಈ ಹೋರಾಟವನ್ನು ಸಂಘಟಿಸಿದೆ. ಪ್ರತಿಭಟನೆಯಲ್ಲಿ ಉತ್ತರ ಕನ್ನಡದ ನಾಗರಿಕರು, ಪರಿಸರ ಪ್ರೇಮಿಗಳು, ವಿವಿಧ ಸಂಘಟನೆಗಳ ಗಣ್ಯರು ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕನ್ನಡ ಮೂಲದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ;

ಪ್ರಮುಖರ ಸಾಥ್:

ನದಿ ಜೋಡಣೆ ವಿರೋಧಿಸಿ ನಡೆಯುವ ಈ ಹೋರಾಟಕ್ಕೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಪರಿಸರ ತಜ್ಞ ಎ.ಎನ್. ಯಲ್ಲಪ್ಪ ರೆಡ್ಡಿ, ಕವಿ ಜಯಂತ ಕಾಯ್ಕಿಣಿ, ತುಂಗಾ-ಭದ್ರಾ ನದಿ ಉಳಿಸಿ ಪಾದಯಾತ್ರೆ ಸಂಚಾಲಕ ಬಸವರಾಜ ಪಾಟೀಲ್, ಅದಮ್ಯ ಚೇತನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಭೂಗರ್ಭ ವಿಜ್ಞಾನಿ ಟಿ.ವಿ. ಶ್ರೀನಿವಾಸ ರೆಡ್ಡಿ, ಪರಿಸರ ವಿಜ್ಞಾನಿ ಟಿ.ವಿ. ರಾಮಚಂದ್ರ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಹಲವು ಗಣ್ಯರು ಬೆಂಬಲ ಸೂಚಿಸಿ ಪಾಲ್ಗೊಳ್ಳಲಿದ್ದಾರೆ.

Must Read