October 3, 2026
Saturday, October 3, 2026
spot_img

ಬಿಜೆಪಿ ಕಾರ್ಯಕರ್ತರ ವಿರುದ್ಧ ನಕಲಿ ಪ್ರಕರಣ: ಸತ್ಯಾಸತ್ಯತೆ ಪರಿಶೀಲಿಸಲು ಶಾಸಕ ಅಭಯ್ ಪಾಟೀಲ್ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ: ​

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಬೆಳಗಾವಿ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ನಕಲಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಆರೋಪಿಸಿದರು.

ಬೆಳಗಾವಿ ಮಹಾನಗರ ಹಾಗೂ ಗ್ರಾಮೀಣ ಭಾಗದ ಕೋರ್ ಕಮಿಟಿ ಸದಸ್ಯರೊಂದಿಗೆ ಶನಿವಾರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಅವರು, ನಕಲಿ ಮತದಾರರ ಕುರಿತು ದೂರುಗಳು ಬಂದಿದ್ದರೆ ಅದರ ಪರಿಶೀಲನೆ ನಡೆಸುವುದು ಚುನಾವಣಾ ಆಯೋಗದ ಜವಾಬ್ದಾರಿಯೇ ಹೊರತು ಪೊಲೀಸರದ್ದಲ್ಲ ಎಂದು ಹೇಳಿದರು. ಕಾರ್ಯಕರ್ತರನ್ನು ತಡರಾತ್ರಿಯವರೆಗೆ ಠಾಣೆಯಲ್ಲಿ ಕೂರಿಸುವ ಬದಲು ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಪೊಲೀಸರು ತೆರಳಿ ವಿಚಾರಣೆ ನಡೆಸುತ್ತಿರುವ ಕ್ರಮವನ್ನೂ ಪ್ರಶ್ನಿಸಿದ ಅವರು, ಪಕ್ಷವು ಕಾರ್ಯಕರ್ತರ ಬೆನ್ನಿಗೆ ನಿಲ್ಲಲಿದೆ ಹಾಗೂ ಅಗತ್ಯವಿದ್ದರೆ ಕಾನೂನಾತ್ಮಕ ಹೋರಾಟ ನಡೆಸಲಿದೆ ಎಂದರು. ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:

ಇದೇ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಅನಿಲ್ ಬೆನಕೆ ಅವರು ಮಾತನಾಡಿ, ಸರ್ಕಾರದ ಒತ್ತಡದಿಂದ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಮಾಜಿ ಶಾಸಕ ಸಂಜಯ ಪಾಟೀಲ್ ಕೂಡ ಪೊಲೀಸರು ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ದೂರಿದರು. ಸರ್ಕಾರ ಹಾಗೂ ಅಧಿಕಾರ ಶಾಶ್ವತವಲ್ಲ 2028 ಕ್ಕೆ ನಮ್ಮ ಸರ್ಕಾರಾಧಿಕಾರಕ್ಕೆ ಬರುತ್ತದೆ ಅವಾಗ ಇದರ ಉತ್ತರ ಕೊಡುತ್ತೇವೆ ಎಂದು ಎಚ್ಚವರಿಸಿದರು.

ಈ ವೇಳೆ ಬಿಜೆಪಿ ಮುಖಂಡ ಮುರುಗೇಂದ್ರಗೌಡ ಪಾಟೀಲ, ನ್ಯಾಯವಾದಿ ಎಂ.ಬಿ, ಜರಳಿ, ಗೀತಾ ಸುತಾರ, ಮಾಜಿ ಶಾಸಕ ಸಂಜಯ್ ಪಾಟೀಲ, ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯರ್ತರು ಸೇರಿದಂತೆ ಇತರರು ಇದ್ದರು.

Must Read