October 5, 2026
Monday, October 5, 2026
spot_img

KRSನಲ್ಲಿ ಕಾವೇರಿ ಆರತಿಗೆ ಬ್ರೇಕ್‌: ಕಾರ್ಯಕ್ರಮದ ದಿನಾಂಕ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಾರಣಾಸಿಯ ಗಂಗಾ ಆರತಿಯ ರೀತಿ ಕರ್ನಾಟಕದ ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್‌ ಅಣೆಕಟ್ಟಿನ ಬಳಿ ಕಾವೇರಿ ಆರತಿಯನ್ನು ಆಯೋಜಿಸುವ ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ.

ಅ.11ರಿಂದ ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಬೇಕಿತ್ತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಿತ್ತು. ಆದರೆ ಅವರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವ ಕಾರಣ ದಿನಾಂಕವನ್ನು ಬದಲಾಯಿಸಲಾಗಿದೆ.

ಕಾಶಿಯಲ್ಲಿ ನಡೆಯುವ ಗಂಗಾ ಆರತಿಯನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಆಗಮಿಸುತ್ತಾರೆ. ಅಂಥದ್ದೇ ರೀತಿಯಲ್ಲಿ ನಮ್ಮ ಕರ್ನಾಟಕದ ಜನತೆಗೆ ಕಾವೇರಿ ಆರತಿಯ ವೈಭವವನ್ನು ಕಣ್ತುಂಬಿಕೊಳ್ಳುವ ಅವಕಾಶ ಮಾಡಲಾಗುತ್ತದೆ. ಅ.11ರ ಬದಲು ಇದೀಗ 18 ರಿಂದ 25 ರವರೆಗೆ ಸತತವಾಗಿ ಕೆಆರ್‌ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.

ಕಳೆದ ವರ್ಷ ಸಿಎಂ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆರಂಭಿಸಲಾಗಿತ್ತು. ಈ ಬಾರಿಯೂ ಕೆಆರ್‌ಎಸ್‌ ಆವರಣದಲ್ಲಿ ಅತ್ಯಂತ ಅದ್ಧೂರಿ ಕಾವೇರಿ ಆರತಿ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ. ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜನ ಕಾತರದಿಂದ ಕಾಯುತ್ತಿದ್ದು,ಸಾವಿರಾರು ಮಂದಿ ಆರತಿಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

Must Read