October 5, 2026
Monday, October 5, 2026
spot_img

ಬಿಜೆಪಿ–ಜೆಡಿಎಸ್ ಮೈತ್ರಿ ರಾಜ್ಯದ ಅಭಿವೃದ್ಧಿಗೆ ಸಹಕಾರಿ : ಬಿ.ಎಸ್‌. ಯಡಿಯೂರಪ್ಪ

ಹೊಸದಿಗಂತ ವರದಿ ಕಲಬುರಗಿ:

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ನಡೆಯಲಿರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಒಗ್ಗಟ್ಟಾಗಿ ಎದುರಿಸಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಜನರು ಬೇಸತ್ತಿದ್ದು, ಬದಲಾವಣೆಯನ್ನು ಬಯಸುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಆಡಳಿತ ವೈಫಲ್ಯದಿಂದ ಜನರಲ್ಲಿ ಅಸಮಾಧಾನ ಹೆಚ್ಚಾಗಿದೆ ಎಂದು ಆರೋಪಿಸಿದರು.

ಬಿಜೆಪಿ–ಜೆಡಿಎಸ್ ಮೈತ್ರಿ ರಾಜ್ಯದ ಅಭಿವೃದ್ಧಿ ಹಾಗೂ ಜನಹಿತದ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ತೆರಳಲಿದ್ದು, ಮುಂಬರುವ ಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಸಾಧಿಸುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದರು.

Must Read