October 6, 2026
Tuesday, October 6, 2026
spot_img

WEATHER | ನಿನ್ನೆ ಸುರಿದ ಜೋರು ಮಳೆಗೆ ಸುಸ್ತಾದ ಬೆಂಗಳೂರು ಮಂದಿ, ರಾಜ್ಯದಲ್ಲಿ ಇಂದು ಬಿಸಿಲಿನ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದು, ಬೆಂಗಳೂರು ಮಂದಿ ಹೈರಾಣಾಗಿದ್ದಾರೆ. ನಿನ್ನೆ ಮಳೆಯಾಗಿರಬಹುದು ಆದರೆ ಇಂದು ರಾಜ್ಯದಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈ ಬಾರಿ ಮಳೆಯ ಅಭಾವವಾಗಿದ್ದು, ಸ್ವಲ್ಪ ದಿನಗಳಲ್ಲಿಯೇ ದಿನಬಳಕೆಯ ಪ್ರತೀ ವಸ್ತುಗಳು ದುಬಾರಿಯಾಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರಿನ ಕೆಲವೆಡೆ ಸಂಜೆಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಸೆಲ್ಸಿಯಸ್ ಹಾಗೂ ಕನಿಷ್ಠ 20 ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ:

ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ ಸುರಿದಿದ್ದು, ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ಹರಿಯುತ್ತಿದೆ. ರಾತ್ರಿ ಸುರಿದ ಮಳೆಯಿಂದಾಗಿ ಇಂದು ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿರುವ ಸಾಧ್ಯತೆ ಇದೆ.

Must Read