October 6, 2026
Tuesday, October 6, 2026
spot_img

ತಾಂತ್ರಿಕ ದೋಷದಿಂದ ರೈತರ ಹೊಲದಲ್ಲಿ ಇಳಿದ ತರಬೇತಿ ವಿಮಾನ: ತಪ್ಪಿದ ಭಾರೀ ದುರಂತ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ನಗರದ ವಿಮಾನ ನಿಲ್ದಾಣ ಸಮೀಪ ಮಂಗಳವಾರ ಸಂಜೆ ತರಬೇತಿ ಲಘು ವಿಮಾನವೊಂದು ತಾಂತ್ರಿಕ ದೋಷದಿಂದ ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದ್ದು, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ.

ಸಾಮಾನ್ಯ ತರಬೇತಿ ಹಾರಾಟದಲ್ಲಿದ್ದ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಮಾಡಬೂಳ ಪೊಲೀಸ್ ಠಾಣೆ ವ್ಯಾಪ್ತಿಯ ತೊಗರಿ ಹೊಲವೊಂದರಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ್ದಾರೆ.

ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ. ತುರ್ತು ಭೂಸ್ಪರ್ಶದ ವೇಳೆ ವಿಮಾನಕ್ಕೆ ಸಣ್ಣ ಪ್ರಮಾಣದ ಹಾನಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದನ್ನೂ ಓದಿ:

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾಡಬೂಳ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ತಾಂತ್ರಿಕ ದೋಷವೇ ಅವಘಡಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಸಂಬಂಧಿತ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಮಾನವನ್ನು ವೀಕ್ಷಿಸಿದರು. ವಿಮಾನ ನಿಲ್ದಾಣ ಸಮೀಪವೇ ಈ ಘಟನೆ ನಡೆದಿರುವುದು ಕೆಲಕಾಲ ಆತಂಕಕ್ಕೆ ಕಾರಣವಾಯಿತು.

Must Read