October 7, 2026
Wednesday, October 7, 2026
spot_img

ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ : ತಾಯಿ, ಮೂರು ವರ್ಷದ ಮಗು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದ ಗ್ಯಾಸ್‌ ಸಿಲಿಂಡರ್‌ ಸ್ಫೋಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಾಯಚೂರು ಮೂಲದ ಕರಿಲಿಂಗಪ್ಪ ಅವರ ಕುಟುಂಬ ವಿನಾಯಕ ಲೇಔಟ್‌ನಲ್ಲಿ ವಾಸವಿದ್ದರು. ಕೂಲಿ ಮಾಡಿಕೊಂಡು ಜೀವನ ನಡೆಸಲಾಗಿತ್ತು. ನಿನ್ನೆ ಬೆಳಗ್ಗೆ ಆರು ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡಿತ್ತು. ಕರಿಲಿಂಗಪ್ಪ ಅವರ ಪತ್ನಿ ಬೆಳಗ್ಗೆ ಅಡುಗೆ ಮನೆಗೆ ಬಂದು ಸ್ಟೋವ್‌ ಹಚ್ಚಲು ಲೈಟರ್‌ ಆನ್‌ ಮಾಡಿದ ಕೂಡಲೇ ಸಿಲಿಂಡರ್‌ ಸ್ಫೋಟಗೊಂಡಿತ್ತು. ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಮೂರು ದಿನಗಳಿಂದ ಗ್ಯಾಸ್‌ ಲೀಕ್‌ ಆಗುತ್ತಿದೆ ಎಂದು ಹೇಳುತ್ತಲೇ ಇದ್ದರು. ಆದರೆ ಅದನ್ನು ಸರಿ ಮಾಡಿಸಲು ಸಮಯ ಆಗಿರಲಿಲ್ಲ. ಸ್ಫೋಟದ ತೀವ್ರತೆಗೆ ಲಕ್ಷ್ಮಮ್ಮ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಚಿಕಿತ್ಸೆ ಫಲಕಾರಿಯಾಗದೇ ಲಕ್ಷ್ಮಮ್ಮ ಹಾಗೂ ಮೂರು ವರ್ಷದ ಅವಳಿ ಮಕ್ಕಳಲ್ಲಿ ಒಂದು ಮಗು ಮೃತಪಟ್ಟಿದೆ. ಕರಿಲಿಂಗಪ್ಪ ಅವರಿಗೆ ಶೇ.45ರಷ್ಟು ಸುಟ್ಟ ಗಾಯಗಳಾಗಿವೆ. 11 ವರ್ಷದ ಚೈತ್ರಾ, 9 ವರ್ಷದ ಬಸವ ಹಾಗೂ ಮತ್ತೊಂದು ಮೂರು ವರ್ಷದ ಮಗು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.

Must Read