October 7, 2026
Wednesday, October 7, 2026
spot_img

ಹೃದಯಾಘಾತಕ್ಕೆ 27 ವರುಷದ ಆಟೋ ಚಾಲಕ ಬ*ಲಿ: ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ

ಹೊಸದಿಗಂತ ವರದಿ ಹಾಸನ:

ಹೃದಯಾಘಾತದಿಂದ ಯುವ ಆಟೋ ಚಾಲಕನೊಬ್ಬ ಮೃತಪಟ್ಟಿರುವ ಘಟನೆ ನಗರದ ವಿಜಯನಗರದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಮೂಲತಃ ಕುದುರುಗುಂಡಿ ಗ್ರಾಮದ ನಿವಾಸಿ ನಂದನ್ (27) ಮೃತರ ಯುವಕ. ಈತ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಒಂದೂವರೆ ವರುಷದದ  ಹಿಂದೆ ವಿವಾಹವಾಗಿದ್ದ. ಪತ್ನಿ ಹಾಗೂ ಮಗಳೊಂದಿಗೆ ವಿಜಯನಗರದಲ್ಲಿ ವಾಸವಾಗಿದ್ದರು ಎನ್ನಲಾಗುತ್ತದೆ.

ಇದನ್ನೂ ಓದಿ:

ಬುಧವಾರ ಬೆಳಿಗ್ಗೆ ಮನೆಯಲ್ಲಿ ಇದ್ದಾಗ ನಂದನ್‌ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದರಾದರೂ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.  

Must Read