ಹೊಸದಿಗಂತ ವರದಿ ಬೆಳಗಾವಿ:
ಖ್ಯಾತ ನಟ ಹಾಗೂ ಹಿರಿಯ ಕಲಾವಿದ ದಿವಂಗತ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಬೆಳಗಾವಿಯ ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳ್ಕರ್ ಅವರು ಅಂತಿಮ ನಮನ ಸಲ್ಲಿಸಿದರು.
ಗೋವಾದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮೃಣಾಲ್ ಹೆಬ್ಬಾಳ್ಕರ್ ಅವರು, ಅಗಲಿದ ಹಿರಿಯ ಕಲಾವಿದರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಬಳಿಕ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಾನಾ ಪಾಟೇಕರ್ ಅವರ ನಿಧನದಿಂದ ಭಾರತೀಯ ಚಿತ್ರರಂಗಕ್ಕೆ, ವಿಶೇಷವಾಗಿ ಅವರ ಅಪಾರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಅವರು ಸಂತಾಪ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್ ಚೋಡಣ್ಕರ್, ಯುರಿ ಅಲೆಮಾವೊ, ನಿಶಾಂತ್ ಆನಂದ್, ಅರ್ಚಿತ್ ನಾಯಕ್ ಹಾಗೂ ವರದಾ ಮರಾಸೋಲ್ಕರ್ ಉಪಸ್ಥಿತರಿದ್ದರು.



