October 10, 2026
Saturday, October 10, 2026
spot_img

‘ಯುವಶಕ್ತಿಗೆ ಪ್ರಧಾನಿ ಮೋದಿ ಹೆದರಿದ್ದಾರೆ’: ದೆಹಲಿ ಪೊಲೀಸ್ ಬಂದೋಬಸ್ತ್ ಕಂಡು ಅಭಿಜೀತ್ ದೀಪ್ಕೆ ವ್ಯಂಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

 CEC ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಮೆರವಣಿಗೆಗೂ ಮುನ್ನ CJP ಮುಖ್ಯಸ್ಥ ಅಭಿಜೀತ್ ದೀಪ್ಕೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ, ಇದಕ್ಕಾಗಿ ನಾನು ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಹೆದರಿದ್ದಾರೆ

ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂಬೈನಿಂದ ದೆಹಲಿಗೆ ಬಂದಿಳಿದ ಅಭಿಜೀತ್ ದೀಪ್ಕೆ, ರಾಜಧಾನಿಯಾದ್ಯಂತ ಪೊಲೀಸ್ ಬಂದೋಬಸ್ತ್ ಕಂಡು,  ಪ್ರಧಾನಿ ಈ ದೇಶದ ಯುವಶಕ್ತಿಗೆ ಹೆದರಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಇಡೀ ರೈಲ್ವೆ, ಮೆಟ್ರೋ ಮತ್ತು ಇಂಟರ್ನೆಟ್ ಅನ್ನು ಸ್ಥಗಿತಗೊಳಿಸುವ ಅಗತ್ಯವೇನಿತ್ತು? ಜಮ್ಮು-ಕಾಶ್ಮೀರದಿಂದ ಸೈನ್ಯವನ್ನು ಹಾಗೂ ನಕ್ಸಲ್ ಪೀಡಿತ ವಲಯಗಳಿಂದ ಸಿಆರ್‌ಪಿಎಫ್ ಪಡೆಗಳನ್ನು ಕರೆತಂದು ದೆಹಲಿ ಬೀದಿಗಳಲ್ಲಿ ನಿಲ್ಲಿಸಲಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ತಮ್ಮದೇ ದೇಶದ ನಾಗರಿಕರ ವಿರುದ್ಧ ಯುದ್ಧ ಸಾರಿದ್ದಾರೆಯೇ? ಎಂದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ:

ಯಾವ ಕಾಯ್ದೆಗೂ ಹೆದರಲ್ಲ, ಹೋರಾಟ ನಿಲ್ಲಲ್ಲ

ಸಂವಿಧಾನದ 19ನೇ ವಿಧಿಯ ಅಡಿಯಲ್ಲಿ ಶಾಂತಿಯುತವಾಗಿ ಮತ್ತು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಪ್ರತಿಭಟನೆ ಮಾಡುವುದು ನಮ್ಮ ಮೂಲಭೂತ ಹಕ್ಕಾಗಿದೆ. ಪೊಲೀಸರು ನನ್ನನ್ನು ಬಂಧಿಸಲು ಅಥವಾ ವಶಕ್ಕೆ ಪಡೆಯಲು ಬಯಸಿದರೆ ಧಾರಾಳವಾಗಿ ಮಾಡಲಿ, ಅದಕ್ಕೆ ನಾನೇನೂ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ವಿರುದ್ಧ ಯುಎಪಿಎ ಅಥವಾ ಎನ್‌ಎಸ್‌ಎ ನಂತಹ ಕಾಯ್ದೆಗಳನ್ನೇ ದಾಖಲಿಸಲಿ, ಅದಕ್ಕೂ ನಾನು ಸಿದ್ಧ. ಆದರೆ ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ನಮ್ಮ ಈ ಪ್ರತಿಭಟನೆ ಧಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ.

Must Read