October 10, 2026
Saturday, October 10, 2026
spot_img

2,459 ಕೋಟಿ ರೂ. ಹೂಡಿಕೆ ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್ ವಿರುದ್ಧ ED ಚಾರ್ಜ್‌ಶೀಟ್ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಂ ಅಸೋಸಿಯೇಟ್ಸ್‌ಗೆ ಸಂಬಂಧಿಸಿದ ಹೂಡಿಕೆ ವಂಚನೆ ಪ್ರಕರಣದಲ್ಲಿ ಶಿವಾನಂದ ನೀಲಣ್ಣನವರ್ ವಿರುದ್ಧ ಜಾರಿ ನಿರ್ದೇಶನಾಲಯ (ED) ದೋಷಾರೋಪ ಪಟ್ಟಿ ಸಲ್ಲಿಸಿದೆ. ಸುಮಾರು 35 ಸಾವಿರ ಹೂಡಿಕೆದಾರರಿಗೆ 2,459 ಕೋಟಿ ವಂಚನೆ ಮಾಡಿರುವ ಆರೋಪ ಈ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ವರದಿಯಾಗಿದೆ.

ಎರಡು ತಿಂಗಳ ಹಿಂದೆ ನೀಲಣ್ಣವರ ಅವರನ್ನು ಬಂಧಿಸಿದ್ದ ED ಅಧಿಕಾರಿಗಳು, ತನಿಖೆ ವೇಳೆ ಸಂಗ್ರಹಿಸಿದ ದಾಖಲೆಗಳ ಆಧಾರದ ಮೇಲೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಅವರ ಬ್ಯಾಂಕ್ ಖಾತೆಯಿಂದ 2.02 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ವರದಿಯಲ್ಲೇನಿದೆ?

ED ತನಿಖೆಯ ಪ್ರಕಾರ, ಹೂಡಿಕೆದಾರರಿಂದ ಸಂಗ್ರಹಿಸಿದ ಹಣವನ್ನು ವಿವಿಧ ಉದ್ದೇಶಗಳಿಗೆ ವರ್ಗಾಯಿಸಲಾಗಿದೆ ಎಂಬ ಆರೋಪವಿದೆ. ಸುಮಾರು 25 ಕೋಟಿ ಹಣವನ್ನು ಶ್ರೀಮಾತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಮತ್ತು ಧನಶ್ರೀ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಠೇವಣಿಯಾಗಿ ಇರಿಸಲಾಗಿತ್ತು. ಈ ಠೇವಣಿಗಳ ಆಧಾರದಲ್ಲಿ ಆಪ್ತರ ಹೆಸರಿನಲ್ಲಿ ಸಾಲ ಪಡೆದು ಭೂಮಿ ಖರೀದಿಸಲಾಗಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಇದಲ್ಲದೆ, ಶಿವಾನಂದ ನೀಲಣ್ಣನವರ್ ಅವರ ಪತ್ನಿ ಮತ್ತು ಅಪ್ರಾಪ್ತ ಪುತ್ರನ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂಬ ಅಂಶವನ್ನೂ ED ಉಲ್ಲೇಖಿಸಿದೆ. ಶಿವಂ ಸೇವಾ ಪ್ರೈವೇಟ್ ಲಿಮಿಟೆಡ್‌ಗೆ 19 ಕೋಟಿ ವರ್ಗಾವಣೆಯಾಗಿದ್ದು, ಶಿವಂ ಲೈಫ್‌ಲೈನ್ ಪ್ರೈವೇಟ್ ಲಿಮಿಟೆಡ್ ಹಾಗೂ ಶಿವಂ ಫುಡ್ಸ್ ಸಂಸ್ಥೆಗಳಿಗೂ ಹಣದ ಸಂಪರ್ಕವಿದೆ ಎಂದು ಆರೋಪಿಸಲಾಗಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ ಹಣದಲ್ಲಿ 5 ಕೋಟಿಯನ್ನು ಚಲನಚಿತ್ರ ನಿರ್ಮಾಣಕ್ಕೆ ಬಳಸಲಾಗಿದೆ ಎಂಬ ಆರೋಪವೂ ಇದೆ. ಷೇರು ವಹಿವಾಟಿನಲ್ಲಿ 185.95 ಕೋಟಿ ನಷ್ಟ ಉಂಟಾಗಿದೆ ಎಂದು ED ತಿಳಿಸಿದೆ.

Must Read