October 10, 2026
Saturday, October 10, 2026
spot_img

ಇತಿಮಿತಿಯಲ್ಲಿ ಕೆಲಸ ಮಾಡಿ: ಹಾಸನ ಡಿಸಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಚಿವರು ಮತ್ತು ಜಿಲ್ಲಾಧಿಕಾರಿ ನಡುವೆ ಸಂಘರ್ಷ ಉಂಟಾಗಿರುವುದಕ್ಕೆ ಆಡಳಿತಾತ್ಮಕ ಸಮನ್ವಯದ ಕೊರತೆಯೇ ಕಾರಣ ಎಂದು ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರದ ಮಿತಿಯಲ್ಲಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ಲತಾಕುಮಾರಿ ಅವರ ಹಿಂದಿನ ಕಾರ್ಯವೈಖರಿಯನ್ನು ಪ್ರಸ್ತಾಪಿಸಿದ ಅವರು, ಅಧಿಕಾರಿಗಳು ತಮ್ಮ ಜವಾಬ್ದಾರಿ ಮತ್ತು ಅಧಿಕಾರದ ಮಿತಿಯನ್ನು ಅರಿತು ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ನೀಡಿರುವ ವಿಚಾರಕ್ಕೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಹಿರಿಯ ಅಧಿಕಾರಿಗಳ ನಡುವೆ ಸಂಘರ್ಷ ಮುಂದುವರಿದರೆ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:

ಡಿಸಿ ಇರಬಹುದು, ಆದರೆ ಹುದ್ದೆಗೆ ತಕ್ಕಂತೆ ನಡೆದುಕೊಳ್ಳಬೇಕು. ಅಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲದಿದ್ದರೆ ಆಡಳಿತ ವ್ಯವಸ್ಥೆ ಸುಗಮವಾಗಿ ನಡೆಯಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ, ಜನರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಆಡಳಿತ ವ್ಯವಸ್ಥೆ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

Must Read

Skip to toolbar