October 12, 2026
Monday, October 12, 2026
spot_img

ಕೈ ಪಾಳಯದಲ್ಲಿ ಕಂಪನ?: 25 ಶಾಸಕರು ಪಕ್ಷ ಬಿಡಲು ರೆಡಿ ಆಗಿದ್ದಾರೆ ಎಂದ ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆ ಘೋಷಣೆಯಾದರೆ ಸಚಿವರು ಸೇರಿದಂತೆ ಕಾಂಗ್ರೆಸ್‌ನ 20ರಿಂದ 25 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲು ಸಿದ್ಧರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿ ಯಾರನ್ನೂ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ. ಆದರೆ ಕಾಂಗ್ರೆಸ್‌ನೊಳಗಿನ ರಾಜಕೀಯ ವಾತಾವರಣ ಬದಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದ ಮೇಲಿನ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ. ಆಡಳಿತ ಪಕ್ಷದೊಳಗೇ ನಾಯಕತ್ವದ ಬಗ್ಗೆ ನಂಬಿಕೆ ಕುಸಿದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಸ್ಟಿಂಗ್ ಆಪರೇಷನ್‌ಗೆ ಕಿಡಿ

ಕಾಂಗ್ರೆಸ್‌ನಲ್ಲಿ ಅಧಿಕಾರ ಪಡೆಯಲು ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂಬ ಚರ್ಚೆಗಳ ಬಗ್ಗೆಯೂ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಸಚಿವರಾಗಲು, ಇನ್ನು ಕೆಲವರು ಮುಖ್ಯಮಂತ್ರಿ ಸ್ಥಾನ ಪಡೆಯಲು ಇಂತಹ ತಂತ್ರಗಳನ್ನು ಬಳಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.

ರಾಜಕೀಯ ಅಧಿಕಾರಕ್ಕಾಗಿ ಸ್ಟಿಂಗ್ ಆಪರೇಷನ್ ನಡೆಸುವುದು ರಾಜ್ಯದ ರಾಜಕೀಯಕ್ಕೆ ಒಳ್ಳೆಯ ಬೆಳವಣಿಗೆಯಲ್ಲ ಎಂದು ಟೀಕಿಸಿದ ಅವರು, ಈ ಬೆಳವಣಿಗೆಗಳ ಹಿಂದೆ ಯಾರಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ ಎಂದಿದ್ದಾರೆ.

Must Read