ಹೊಸದಿಗಂತ ವರದಿ ಸುಳ್ಯ:
ವಿದ್ಯುತ್ ಶಾಕ್ ಗೆ ಒಳಗಾಗಿ ಇಬ್ಬರು ಸಾವನ್ನಪ್ಪಿ ಬಾಲಕನೋರ್ವ ಗಂಭೀರ ಗಾಯಗೊಂಡ ಹೃದಯ ವಿದ್ರಾವಕ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿ ಆಧಾರದಲ್ಲಿ ಮೃತಪಟ್ಟವರನ್ನು ಬೊಮ್ಮೆಟ್ಟಿ ನಿವಾಸಿ ಭರತ್ ಹಾಗೂ ಉಪ್ಪಿನಂಗಡಿ ಮೂಲದ ಗಣೇಶ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ಭರತ್ ಉತ್ತಮ ಕ್ರೀಡಾಪಟುವಾಗಿದ್ದು ಗ್ರಾಮದಲ್ಲಿ ಒಳ್ಳೆಯ ಹೆಸರನ್ನು ಗಳಿಸಿಕೊಂಡಿದ್ದಾರೆ. ಹಲವೆಡೆ ಸನ್ಮಾನಗಳೂ ಲಭಿಸಿವೆ. ಮನೆಗೆ ಇವರೇ ಆಧಾರ ಸ್ಥಂಭವಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ಈ ವಿದ್ಯುತ್ ಆವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು ಮಾಹಿತಿ ನಿರೀಕ್ಷಿಸಲಾಗಿದೆ.



