October 13, 2026
Tuesday, October 13, 2026
spot_img

ಕಬ್ಬಿಗೆ ಎಂಎಸ್‌ಪಿಗೆ ಆಗ್ರಹಿಸಿ ರೈತರಿಂದ ಹೆದ್ದಾರಿ ಬಂದ್‌: ಪುಣೆ-ಬೆಂಗಳೂರು ಹೈವೇ ರೂಟ್‌ ಚೇಂಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಇಂದಿನಿಂದ ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪುಣೆ ಬೆಂಗಳೂರಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿರುವುದರಿಂದ ಭಾರೀ ಮತ್ತು ಲಘು ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಬೆನ್ನಲ್ಲೇ ರಾಜ್ಯ ರೈತ ಸಂಘ ಹೆದ್ದಾಬರಿ ಬಂದ್‌ಗೆ ಕರೆ ನೀಡಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹಾಗೂ ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ ಇದ್ದರು. ಈ ಸಭೆಯಲ್ಲಿ ಬೆಂಬಲ ಬೆಲೆ ನೀಡುವಂತೆ ರೈತ ಸಂಘಟನೆಗಳು ಮಾಡಿದ ಮನವಿಗೆ ಸ್ಪಂದನೆ ಸಿಕ್ಕಿಲ್ಲ.

ಬೆಳಗಾವಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಧಾರವಾಡದಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ. ಧಾರವಾಡದಿಂದ ಬರುವ ವಾಹನಗಳು ಅಳ್ನಾವರ, ಖಾನಾಪುರ ಮಾರ್ಗವಾಗಿ ಬೆಳಗಾವಿ ಪ್ರವೇಶಿಸಬಹುದು. ಧಾರವಾಡದಿಂದ ಗೋಕಾಕಕ್ಕೆ ತೆರಳುವ ವಾಹನಗಳು ಬೆಳವಡಿ, ಬೈಲಹೊಂಗಲ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಬರುವ ವಾಹನಗಳು ಕಾಗಲ್, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಮತ್ತು ಸವದತ್ತಿ ಮಾರ್ಗವಾಗಿ ಧಾರವಾಡ ತಲುಪುವಂತೆ ಸಂಚಾರ ಬದಲಾವಣೆ ಮಾಡಲಾಗಿದೆ. ಭಾರೀ ವಾಹನಗಳು ಹಾಗೂ ಲಘು ವಾಹನಗಳ ಸಂಚಾರಕ್ಕೂ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

Must Read