ಹೊಸದಿಗಂತ ವರದಿ ಯಾದಗಿರಿ:
ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್‌ಗಳ ಹಿಂದಿನ ಸತ್ಯಾಸತ್ಯತೆ ಬಹಿರಂಗಪಡಿಸಲು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಚಾರವನ್ನು ಬಹಿರಂಗವಾಗಿ ಪ್ರಸ್ತಾಪಿಸಿರುವುದರಿಂದ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ, ದಲಿತ ಮೀಸಲಾತಿ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಕಾಂಗ್ರೆಸ್‌ನ ರಾಜಕೀಯ ನಿಲುವುಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:
ಸ್ಟಿಂಗ್ ಆಪರೇಷನ್ ಕುರಿತು ಗಂಭೀರ ಆರೋಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾರೋ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಮೇಲೆ ಸ್ಟಿಂಗ್ ಆಪರೇಷನ್ ನಡೆಸುತ್ತಿದ್ದಾರೆ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯೇ ಇಂತಹ ವಿಚಾರವನ್ನು ಸಾರ್ವಜನಿಕವಾಗಿ ಹೇಳುವುದಾದರೆ ಅದರ ಹಿಂದಿನ ಸತ್ಯವನ್ನು ಬಹಿರಂಗಪಡಿಸುವ ಜವಾಬ್ದಾರಿಯೂ ಅವರ ಮೇಲಿದೆ ಎಂದು ಛಲವಾದಿ ಹೇಳಿದರು.



