ಎರಡನೇ ಮಹಡಿಯಿಂದ ಬಿದ್ದು 10 ತಿಂಗಳ ಹೆಣ್ಣು ಮಗು ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆ.ಆರ್ ನಗರ ಪಟ್ಟಣದ ಹುಣಸೂರು ರಸ್ತೆಯ ರೇಷ್ಮೆ ಇಲಾಖೆ ಮುಂಭಾಗದ ಬೀದಿಯಲ್ಲಿ ಎರಡನೇ ಮಹಡಿಯಿಂದ ಬಿದ್ದು 10 ತಿಂಗಳ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

10 ತಿಂಗಳ ಬಾಲಕಿ ರಫೀಕ್ ಆಟವಾಡುತ್ತಿದ್ದಳು. ಆಟದ ವೇಳೆ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಕೂಡಲೇ ಪೋಷಕರು ಕೆ.ಆರ್.ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೇಲಿನಿಂದ ಮಗು ಬೀಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!