15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ 17ರ ಬಾಲಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.
ಬಾಲಕಿಯನ್ನು 17 ವರ್ಷದ ಬಾಲಕ ಅಪಹರಣ ಮಾಡಿ, ಒಂದು ತಿಂಗಳು ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಆತ ಒಂದು ತಿಂಗಳ ಹಿಂದೆ ತನ್ನದೇ ಗ್ರಾಮದ ಬಾಲಕಿಯನ್ನು ಅಪಹರಣ ಮಾಡಿಗುಜರಾತ್‌ಗೆ ಕರೆದುಕೊಂಡು ಹೋಗಿ ಒಂದು ತಿಂಗಳು ಅತ್ಯಾಚಾರ ಎಸಗಿದ್ದಾನೆ.
ಈ ಕುರಿತು ಡಿಸೆಂಬರ್‌ 25ರಂದು ಬಾಲಕಿಯ ತಂದೆಯು ದೂರು ನೀಡಿದ್ದಾರೆ. ಇದರ ಅನ್ವಯ ಪೊಲೀಸರು ತನಿಖೆ ನಡೆಸಿದ್ದು, ಉತ್ತರ ಪ್ರದೇಶದ ಗದ್ವರ್‌ಮೋರ್‌ ಗ್ರಾಮದ ಬಳಿ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಬಾಲಕನ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮಕ್ಕಳ ಸುಧಾರಣೆ ನಿಲಯಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!