SHOCKING | ಮಂಗಳೂರಿನಲ್ಲಿ ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುವ ಪೀಳಿಗೆಯಲ್ಲಿ ಲೋ ಬಿಪಿ, ಹೃದಯಾಘಾತ ಹೆಚ್ಚಾಗುತ್ತಿದ್ದು, ಮಂಗಳೂರಿನಲ್ಲಿ 19 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಬೆಳ್ತಂಗಡಿಯ ನೆರಿಯಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಈಗಿನ್ನೂ ಸಾವಿರ ಕನಸುಗಳನ್ನು ಹೊತ್ತು ಸಾಗಿದ್ದ ವಿದ್ಯಾರ್ಥಿನಿ ಬದುಕು ಕೊನೆಯಾಗಿದೆ. ಸುಮಾ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲ ದಿನಗಳಿಂದ ಸುಮಾಗೆ ಅನಾರೋಗ್ಯ ಕಾಡಿದ್ದು, ಮನೆಗೆ ತೆರಳಿದ್ದರು.

ಆ.9ರಂದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಇದಾದ ಕೆಲವೇ ದಿನಗಳಲ್ಲಿ ಮತ್ತೆ ಅನಾರೋಗ್ಯ ಕಾಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ತದನಂತರ ಮನೆಗೆ ಬಂದು ವಿಶ್ರಾಂತಿ ಪಡೆದಿದ್ದರು. ಸುಮಾ ಆರೋಗ್ಯ ಸ್ಥಿರವಾಗಿತ್ತು. ಆ.13ರ ಸಂಜೆ ಮತ್ತೆ ಆರೋಗ್ಯ ಸ್ಥಿತಿ ಏಕಾಏಕಿ ಹದಗೆಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈಗಿನ್ನೂ ಬಾಳಿ ಬದುಕಬೇಕಾಗಿದ್ದ ಮಗಳು ಕಣ್ಣೆದುರೇ ಮೃತಪಟ್ಟಿದ್ದು, ಪೋಷಕರು ಆಘಾತಕ್ಕೊಳಗಾಗಿದ್ದಾರೆ, ಕುಟುಂಬದವರು ಆಕ್ರಂದನ ಮುಗಿಲು ಮುಟ್ಟುವಂತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!