ಲೋಕಸಭಾ ಚುನಾವಣೆ ಮತದಾನ ನಡೆಯುವ ದಿನ ಕರ್ನಾಟಕದಲ್ಲಿ 2 ದಿನಗಳ ಸಾರ್ವತ್ರಿಕ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶವೇ ಕುತೂಹಲದಿಂದ ಕಾಯುತ್ತಿರುವ 2024ರ ಲೋಕಸಭೆ ಚುನಾವಣೆ ದಿನ ಹತ್ತಿರ ಬರುತ್ತಿದೆ, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು. ಕರ್ನಾಟಕದಲ್ಲಿ ಚುನಾವಣೆಯ ಎರಡೂ ದಿನಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26 ರಂದು ಮತ್ತು ಎರಡನೇ ಹಂತ ಮೇ 7 ರಂದು ನಡೆಯಲಿದೆ. ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ದಿನಗಳಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಇಲಾಖೆಗಳು, ಶಾಲೆಗಳು ಮತ್ತು ಕಾಲೇಜುಗಳು, ಎಲ್ಲಾ ಕಾರ್ಪೊರೇಟ್‌ಗಳಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಸಹಿತ ರಜೆ ಘೋಷಿಸಿದ್ದಾರೆ.

ಎಲ್ಲರೂ ಮತದಾನ ಮಾಡಲು ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!