ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಗ್ರಾಮದ ಜಮೀನಿನಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಸಾತ್ವಿಕ್ ಮುಜಗೊಂಡ (2) ಕೊಳವೆ ಬಾವಿಗೆ ಬಿದ್ದ ಬಾಲಕ.
ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಜೆಸಿಬಿ ಉಪಕರಣ ಬಳಸಿ ಕಾರ್ಯಾಚರಣೆ ನಡೆಸಿದ್ದಾರೆ. ಬಾಲಕನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.