Friday, July 1, 2022

Latest Posts

ಅ. 25 ರಿಂದ 1- 5ನೇ ತರಗತಿ ಶಾಲೆ ಆರಂಭಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್: ಮಾರ್ಗಸೂಚಿ ಪಾಲನೆ ಕಡ್ಡಾಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

1-ರಿಂದ 5ನೇ ತರಗತಿ ವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ.
ಅಕ್ಟೋಬರ್‌ 25 ರಿಂದ ಶಾಲೆ ಆರಂಭ ಮಾಡಲು ಕೋವಿಡ್‌ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಲಾಗಿದೆ.
ಈಗಾಗಲೇ 6 ನೇ ತರಗತಿಯಿಂದ ಉನ್ನತ ಶಿಕ್ಷಣ ಹಂತದವರೆಗಿನ ಎಲ್ಲ ತರಗತಿಗಳ ಭೌತಿಕ ಕ್ಲಾಸ್‌ ಅನುಮತಿ ನೀಡಿದ್ದು, ಇದೀಗ 1-ರಿಂದ 5ನೇ ತರಗತಿ ಶಾಲೆಗಳನ್ನು ಪುನರ್‌ ಆರಂಭ ಮಾಡಲು ಮುಂದಾಗಿದೆ.
ಇನ್ನೂ ಶಾಲೆಗೆ ಮಕ್ಕಳಿಗೆ ಬರಲು ಯಾವುದೇ ಪ್ರಯತ್ನ ಮಾಡುವಂತಿಲ್ಲ, ಜೊತೆಗೆ ಮಕ್ಕಳು ಶಾಲೆಗೆ ಬರಲು ಹಾಜರಾತಿ ಕಡ್ಡಾಯವಲ್ಲ ಅಂತ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ಇದೇ ವೇಳೆ ಒಂದು ವಾರದ ಮಟ್ಟಿಗೆ ಶಾಲೆಯ ಅವಧಿಯನ್ನು ಕಡಿತ ಮಾಡಲಾಗುವುದು ಬಳಿಕ ಎಂದಿನಂತೆ ಸಮಯವನ್ನು ಮುಂದುವರೆಯಲಿದೆ ಅಂತ ಹೇಳಿದ್ದಾರೆ. ಇದಲ್ಲದೇ ಮಕ್ಕಳ ಪೋಷಕರ ಈಗಾಗಲೇ ಶಾಲೆ ಆರಂಭವಾಗಿರುವುದಕ್ಕೆ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಶಾಲೆ ಆರಂಭಕ್ಕೆ ಮಾರ್ಗಸೂಚಿ:
ಕೋವಿಡ್‌ ಮಾರ್ಗಸೂಚಿ ಪಾಲಿಸಿ ಶಾಲೆ ಆರಂಭಕ್ಕೆ ಸೂಚನೆ
ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಅನುಮತಿ ಅವಶ್ಯಕ
ಕ್ಲಾಸ್‌ ರೂಮ್‌ನಲ್ಲಿ ಶೇ 50 ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
ಶಾಲೆಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ
ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸೂಚನೆ
ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss